ಲೇಖನ
*ಪ್ರಜಾತಂತ್ರ ಗಣರಾಜ್ಯದಲ್ಲಿ
ನಮ್ಮ ಜವಾಬ್ದಾರಿ*
ನಾಲ್ಕಾರು ಜನ ಒಂದೆಡೆ ಸೇರಿದರೆ ಮುಗಿಯಿತು "ಈ ಸರ್ಕಾರ ಸರಿಯಿಲ್ಲ ಆ ಸರ್ಕಾರ ಸರಿಯಿಲ್ಲ ಈ ಮುಖ್ಯಮಂತ್ರಿ ಸರಿ ಇಲ್ಲ ಆ ಮಂತ್ರಿ ಉಪಯೊಗ ಇಲ್ಲ ಈ ಎಂ ಎಲ್ ಎ ಬರೀ ಆಶ್ವಾಸನೆ ಕೊಡೋದೆ ಆಯ್ತು " ಈಗೆ ಪುಂಕಾನುಪುಂಕವಾಗಿ ಮಾತನಾಡಿ ವೀರಾವೇಶ ತೋರುವಲ್ಲಿ ಎಲ್ಲರೂ ನಾ ಮುಂದು ತಾ ಮುಂದು ಎಂದು ಬೇರೆಯವರ ತೆಗಳಲು ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಮನೋಭಾವ ತೋರುವರ ಸಂಖ್ಯೆ ಹೆಚ್ಚಾಗಿದೆ.
ಪ್ರಜಾತಂತ್ರ ಗಣರಾಜ್ಯ ದಲ್ಲಿ ಪ್ರಜೆಗಳ ಜವಾಬ್ದಾರಿ ಅಗಾಧ. ಅದು ಚುನಾವಣಾ ಕಾರ್ಯದಿಂದ ಹಿಡಿದು ನೀತಿ ನಿರೂಪಣೆಯ ವರೆಗೂ ವಿಸ್ತರಿಸಿದೆ .
ಚುನಾವಣಾ ಸಂದರ್ಭದಲ್ಲಿ ದೇಶದಲ್ಲಿ ಶೇಕಡಾವಾರು ನೂರು ಮತದಾನ ಸ್ವಾತಂತ್ರ್ಯ ಬಂದಾಗಿನಿಂದ ಆಗಿಲ್ಲ .ಶೇಕಡಾ ಎಪ್ಪತ್ತು ಮತದಾನವಾದರೆ ಅದೇ ದಾಖಲೆ ಉಳಿದ ಮತದಾರರಿಗೆ ಜವಾಬ್ದಾರಿ ಇಲ್ಲವೆ ?ಇಂತವರು ನಾಯಕರ ರಾಜಕಾರಣಿಗಳ ಸರ್ಕಾರಗಳನ್ನು ಯಾವ ನೈತಿಕತೆಯಿಂದ ಟೀಕಿಸುತ್ತಾರೆ.?
ಇನ್ನೂ ಮತದಾನ ಮಾಡುವ ಮಹಾಪ್ರಭುಗಳ ಕಥೆ ಬೇರೆಯೇ ಇದೆ ಮತದಾನಕ್ಕೆ ಮುನ್ನ ಹಣ ಹೆಂಡ ಸೀರೆ ಮುಂತಾದ ಆಮಿಷಗಳಿಗೆ ಬಲಿಯಾಗಿ ತಮ್ಮ ಮತ ಮಾರಿಕೊಂಡು ಮೊದಲ ಬಾರಿಗೆ ಭ್ರಷ್ಟಾಚಾರ ಬೆಳೆಯಲು ಕಾರಣರಾಗಿ ಮುಂದೆ ಇದೇ ಮತದಾರರು ತಮ್ಮ ನೇತಾರರ ತೆಗಳುವುದೆಷ್ಟು ಸರಿ?
*ಹಾಗಾದರೆ ನಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿ ಯಾಗಿ ನಿಭಾಯಿಸುವುದು ಹೇಗೆ*
* ಮುಂಬರುವ ಎಲ್ಲಾ ಚುನಾವಣೆಯಲ್ಲಿ ಎಲ್ಲರೂ ಮತ ಚಲಾಯಿಸುವ ಪ್ರತಿಜ್ಞೆ ಮಾಡೋಣ
* ಆಮಿಷಕ್ಕೆ ಬಲಿಯಾಗದೇ ಮತ ಚಲಾಯಿಸೋಣ
* ಶಾಸನ ಮಾಡುವಾಗ ನಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಂಡು ನಮ್ಮ ನೀತಿ ನಿಯಮಗಳನ್ನು ನಾವೆ ರೂಪಿಸಿಕೊಳ್ಳಲು ಪಣ ತೊಡೋಣ
* ಸರಿಯಾಗ ಕಾರ್ಯ ನಿರ್ವಿಸದ ನಮ್ಮ ಪ್ರತಿನಿಧಿ ಗಳ ಹಿಂದಕ್ಕೆ ಕರೆಯುವ ಚಳುವಳಿ ರೂಪಿಸೋಣ
* ಕಾರ್ಯಾಂಗದ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಂಬಲ ನೀಡಿ ಆಡಳಿತವನ್ನು ಭ್ರಷ್ಟಾಚಾರ ಮುಕ್ತವಾಗಿ ಮಾಡಲು ಪ್ರಯತ್ನ ಮಾಡೋಣ
* ನ್ಯಾಯಾಂಗ ಮತ್ತು ಕಾನೂನು ಗಳನ್ನು ಗೌರವಿಸೋಣ
*ಸರ್ಕಾರದ ನಾಲ್ಕನೇ ಅಂಗವಾದ ಪತ್ರಿಕೋದ್ಯಮ ವನ್ನು ಸಮಾಜದ ಅಭಿವೃದ್ಧಿ ಗೆ ಬಳಸಿ ಬೆಳೆಸೋಣ
ಈ ಮೇಲಿನ ಸಂಕಲ್ಪ ದೊಂದಿಗೆ ಎಲ್ಲಾ ಭಾರತೀಯರು ಮುನ್ನೆಡದರೆ ಆಗ ಪರಿಣಾಮಕಾರಿ ಗಣತಂತ್ರದ ಮೂಲಕ ನಮ್ಮ ದೇಶ ಪ್ರಪಂಚದಲ್ಲಿ ಮಾದರಿ ಆಗುವುದರಲ್ಲಿ ಸಂದೇಹವಿಲ್ಲ .
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*

No comments:
Post a Comment