*ಗಜ಼ಲ್48*
ಕೆಲವರಿಗೆ ದೇಶವೇ ಕಾಣದು ಬರಲು ಈ ಯೌವನ
ಹಲವರಿಗೆ ನೆಲವೇ ಕಾಣದು ಬಲಿಯಲು ಈ ಯೌವನ
ಮೈಯೆಲ್ಲಾ ಕಣ್ಣಾಗಿ ತನ್ಮಯವಾಗಿರಬೇಕು ಕಾರ್ಯದಿ
ಅಡ್ಡದಾರಿ ಹಿಡಿಸುವುದು ಮೈಮರೆಯಲು ಈ ಯೌವನ
ಚಿತ್ತ ಚಾಂಚಲ್ಯ ಮೊಂಡು ಭಂಡ ವಿತಂಡವಾದ
ಬಾಳೆಲ್ಲ ಗೋಳು ಅಮಲೇರಿರಲು ಈ ಯೌವನ
ಸುಕರ್ಮ ಸುವಾರ್ತೆಗಳೆಡೆಗೆ ಸಾಗದು ಮನ
ಮೂಗಿನ ನೇರಕ್ಕಿರುವುದು ಚಿಂತನೆ ಜೊತೆಗಿರಲು ಈ ಯೌವನ
ನೆನೆದುದ ಸಾಧಿಸುವ ಅಗಣಿತ ಶಕ್ತಿಯ ಆಗರ
ಭುವಿಯೇ ಸ್ವರ್ಗ ಸದುಪಯೋಗವಾಗಲು ಈ ಯೌವನ
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
ಕೆಲವರಿಗೆ ದೇಶವೇ ಕಾಣದು ಬರಲು ಈ ಯೌವನ
ಹಲವರಿಗೆ ನೆಲವೇ ಕಾಣದು ಬಲಿಯಲು ಈ ಯೌವನ
ಮೈಯೆಲ್ಲಾ ಕಣ್ಣಾಗಿ ತನ್ಮಯವಾಗಿರಬೇಕು ಕಾರ್ಯದಿ
ಅಡ್ಡದಾರಿ ಹಿಡಿಸುವುದು ಮೈಮರೆಯಲು ಈ ಯೌವನ
ಚಿತ್ತ ಚಾಂಚಲ್ಯ ಮೊಂಡು ಭಂಡ ವಿತಂಡವಾದ
ಬಾಳೆಲ್ಲ ಗೋಳು ಅಮಲೇರಿರಲು ಈ ಯೌವನ
ಸುಕರ್ಮ ಸುವಾರ್ತೆಗಳೆಡೆಗೆ ಸಾಗದು ಮನ
ಮೂಗಿನ ನೇರಕ್ಕಿರುವುದು ಚಿಂತನೆ ಜೊತೆಗಿರಲು ಈ ಯೌವನ
ನೆನೆದುದ ಸಾಧಿಸುವ ಅಗಣಿತ ಶಕ್ತಿಯ ಆಗರ
ಭುವಿಯೇ ಸ್ವರ್ಗ ಸದುಪಯೋಗವಾಗಲು ಈ ಯೌವನ
*ಸಿ.ಜಿ.ವೆಂಕಟೇಶ್ವರ*
*ಗೌರಿಬಿದನೂರು*
No comments:
Post a Comment