*ನಾ ಓದಿದ ಪುಸ್ತಕ*
*ಕಾಲಚಕ್ರ*
ಕಥಾ ಸಂಕಲನ
ಲೇಖಕರು : ನಾಗರಾಜ್ ಜಿ ನಾಗಸಂದ್ರ
ಪ್ರಕಾಶನ : ವರ್ಷಾ ಪ್ರಕಾಶನ
ಹನ್ನೆರಡು ವಿಭಿನ್ನವಾದ ಕಥಾವಸ್ತುವನ್ನು ಒಳಗೊಂಡಿರುವ ಈ ಪುಸ್ತಕದಲ್ಲಿ ಒಂದಕ್ಕೊಂದು ಉತ್ತಮ ಕಥೆಗಳು ಇವೆ .ಒಂದೇ ಸಿಟ್ಟಿಂಗ್ನಲ್ಲಿ ಓದಿ ಮುಗಿಸಿದ ಈ ಪುಸ್ತಕ ನನ್ನ ಬಹುವಾಗಿ ಕಾಡಿತು .
ಮಹಿಳೆಯರು ಉನ್ನತ ಹುದ್ದೆಯನ್ನು ಅಲಂಕರಿಸಿದರೂ ಅವರ ಶೋಷಣೆಯು ನಿಂತಿಲ್ಲ ಎಂದು ಮೊದಲ ಕಥೆಯಾದ
*ಪರಿವರ್ತನೆ* ಯಲ್ಲಿ ಮನೋಜ್ಞವಾಗಿ ಚಿತ್ರಿಸಿದ್ದಾರೆ ತಹಶಿಲ್ದಾರರಂತಹ ಉನ್ನತ ಹುದ್ದೆಯಲ್ಲಿದ್ದರೂ ಮನೆಯಲ್ಲಿ ಗಂಡನ ಕಿರುಕುಳಕ್ಕೆ ಬೇಸತ್ತು ಅಡ್ಡದಾರಿ ಹಿಡಿದು ಪುನಃ ಪರಿವರ್ತನೆ ಹೊಂದುವ ರೀತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ.
ನನಗೆ ವೈಯಕ್ತಿಕವಾಗಿ ಬಹಳ ಇಷ್ಟವಾದ ಕಥೆ *ಮಾರುತ* ಇದರಲ್ಲಿ ರೈತನ ಹಾಡು ಪಾಡುಗಳನ್ನು ವಿವರವಾಗಿ ಬಿಡಿಸಿಹೇಳಿದ್ದಾರೆ
ಈ ಕಥೆಯಲ್ಲಿ ಸುಭೀಕ್ಷವಾಗಿರುವ ರೈತನ ಚಿತ್ರಣದ ಜೊತೆಗೆ ಪ್ರಸ್ತುತ ಇರುವ ಅಂತರ್ಜಲ ಕುಸಿತ ರೈತರಸಾಲ ,ರೈತರ ಆತ್ಮಹತ್ಯೆ ಬಗ್ಗೆ ಬೆಳಕು ಚೆಲ್ಲಿ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.
*ಕಾಲಚಕ್ರ* ಕಥೆಯಲ್ಲಿ ಹಣದ ಹಿಂದೆ ಬಿದ್ದು ದುಡ್ಡೇ ಸರ್ವಸ್ವ ಎಂದು ಜೀವನವನ್ನೇ ಹಾಳುಮಾಡಿಕೊಳ್ಳುವ ಯುವಕನ ಕಥೆ ಮೂಲಕ ಯುವ ಜನಾಂಗವನ್ನು ಕವಿ ಎಚ್ಚರಿಸಿದ್ದಾರೆ.
ಸಾಹಿತಿಯಾದವನು ತಾಳ್ಮೆಯಿಂದ ಇರಬೇಕು ಕೇವಲ ಹಾರ ತುರಾಯಿ ಪ್ರಶಸ್ತಿಯ ಹಿಂದೆ ಓಡಬಾರದು ಅವು ನಮ್ಮನ್ನು ಹುಡುಕಿಕೊಂಡ ಬರುವವುಎಂದು *ಗುರಿಮುಟ್ಟದ ಹಾದಿ*ಯಲ್ಲಿ ಮನೋಜ್ಞವಾಗಿ ಚಿತ್ರಿಸಿದ್ದಾರೆ.
ಸಮಾಜವಾದಿ ತತ್ವ ರೂಢಿಸಿಕೊಂಡು ಬದಲಾವಣೆಗಳನ್ನು ತರಲು ಹೋಗಿ ತನ್ನ ಕುಟುಂಬವನ್ನೇ ತೊಂದರೆಗೆ ಒಡ್ಡುವ *ಗಾಳಿ ಗೋಪುರ*ಕಥಾ ಚಿತ್ರಣ ಓದುಗರ ಕಣ್ಣಲ್ಲಿ ನೀರು ತರಿಸುತ್ತದೆ .
ಈಗೆ ಎಲ್ಲಾ ಕಥೆಗಳು ವಿಭಿನ್ನವಾದ ನಿರೂಪಣೆ ಮತ್ತು ಕಥಾವಸ್ತುವಿನಿಂದ ನಮ್ಮ ಮನ ಸೆಳೆಯುತ್ತವೆ.
ಈ ಕಥಾ ಸಂಕಲನ ಓದಿ ಮುಗಿಸಿದಾಗ ಒಂದು ಒಳ್ಳೆಯ ಪುಸ್ತಕ ಓದಿದ ಅನುಭವ ನಿಮಗಾಗುವುದು ಗ್ಯಾರಂಟಿ .
*ಸಿ ಜಿ.ವೆಂಕಟೇಶ್ವರ*
*ಗೌರಿಬಿದನೂರು*

No comments:
Post a Comment