10 October 2023

ಅಂಡಮಾನ್.ಬಗ್ಗೆ ಒಂದು ಪರಿಚಯ...





 


ಭಾಗ ೫ ಅಂಡಮಾನ್.. ಒಂದು ಪರಿಚಯ..


ಅಂಡಮಾನ್ ದ್ವೀಪಗಳು   ಬಂಗಾಳ ಕೊಲ್ಲಿಯಲ್ಲಿರುವ ಭಾರತದ ಆಧೀನಕ್ಕೆ ಒಳಪಟ್ಟ ದ್ವೀಪ ಸಮೂಹ. ಈ ಸಮೂಹದಲ್ಲಿರುವ ಹೆಚ್ಚಿನ ದ್ವೀಪಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ ಎಂಬ ಹೆಸರಿನಲ್ಲಿ ಕೇಂದ್ರಾಧೀನ ಪ್ರದೇಶವಾಗಿ ಭಾರತಕ್ಕೆ ಸೇರಿದ್ದರೂ ಕೆಲವು ಸಣ್ಣ ದ್ವೀಪಗಳು ಮ್ಯಾನ್ಮಾರ್ ದೇಶಕ್ಕೆ ಸೇರಿವೆ.


ಪುರಾತತ್ವ ಶಾಸ್ತ್ರದ ಅನುಸಾರ ಅಂಡಮಾನ್ ದ್ವೀಪ ಸಮೂಹಗಳಲ್ಲಿ ಜನವಸತಿ ಸಾವಿರಾರು ವರ್ಷಗಳಿಂದಲೂ ಕಂಡುಬರುತ್ತದೆ.ಮಧ್ಯ ಶಿಲಾಯುಗದಿಂದ ದೇಶೀಯ ಅಂಡಮಾನ್ ಜನಾಂಗ 18ನೆಯ ಶತಮಾನದವರೆಗೆ ಅಲ್ಲಲ್ಲಿ ಚದುರಿದಂತೆ ಬದುಕಿದ್ದರು.ಪ್ರಸಿದ್ಧ ಭೂಗೋಳ ಶಾಸ್ತ್ರಜ್ಞ ಟಾಲೆಮಿ ಈ ದ್ವೀಪ ಸಮೂಹಗಳ ಅರಿತಿದ್ದು ತನ್ನ ಬರಹಗಳಲ್ಲಿ ಬೇರೊಂದು ಹೆಸರಿನಲ್ಲಿ ಉಲ್ಲೇಖಿಸಿದ್ದಾನೆ.20ನೆಯ ಶತಮಾನದ ಪರ್ಷಿಯನ್ ನಾವಿಕ ಬುಜುರ್ಗ್ ಇಬಿನ್ ಶೆಹ್ರಿಯಾರ್ ತನ್ನ ಪ್ರವಾಸ ಕಥನ ಐಜಾಬ್ ಅಲ್ ಹಿಂದ್ ಅಂದರೆ ಭಾರತದ ಅದ್ಭುತಗಳು  ಎಂಬ ಪುಸ್ತ್ರಕದಲ್ಲಿ ಈ ದ್ವೀಪ ಸಮೂಹಗಳಿಗೆ ಅಂಡಮಾನ್ ಎಂದೇ ಉಲ್ಲೇಖಿಸಿ ಇಲ್ಲಿ ನರಭಕ್ಷಕ ಜನಾಂಗದವರು ವಾಸಿಸುತ್ತಿದ್ದಾರೆ ಎಂದು ಬರೆದಿದ್ದಾನೆ.ಸಾ ಶ . 8೦೦ ರಿಂದ 1200ರ ವರೆಗೆ ತಮಿಳು ಚೋಳರು ತಮ್ಮ ಸಾಮ್ರಾಜ್ಯವನ್ನು ಸಮುದ್ರಾಚೆಗೆ ಈಗಿನ ಮಲೇಷ್ಯಾದವರೆಗೆ ವಿಸ್ತರಿಸಿದರು. ರಾಜೇಂದ್ರ ಚೋಳ  ಈ ದ್ವೀಪ ಸಮೂಹಗಳನ್ನು ಸುಮಾತ್ರದ ಶ್ರೀವಿಜಯ ಸಾಮ್ರಾಜ್ಯದ ಮೇಲೆ ದಂಡೆತ್ತಲು ಆಯಕಟ್ಟಿನ ನೌಕಾನೆಲೆಗಳನ್ನಾಗಿ ಮಾಡಿಕೊಂಡಿದ್ದನು.1798ರಲ್ಲಿ ಬ್ರಿಟಿಷರು ಇಲ್ಲಿ ತಮ್ಮ ನೌಕಾ ನೆಲೆ ಮತ್ತು ಕೈದಿಗಳಿಗಾಗಿ ವಸಾಹತನ್ನು ಸ್ಥಾಪಿಸಿದರು.1857ರ ಪ್ರಥಮ  ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸೆರೆಸಿಕ್ಕ ಕೈದಿಗಳನ್ನು ಬಂಧಿಸಲು  ಪೋರ್ಟ್ ಬ್ಲೇರ್‍ ನಲ್ಲಿ ಬ್ರಿಟಿಷರು ದೊಡ್ಡ ಬಂಧೀಖಾನೆಯನ್ನು ನಿರ್ಮಿಸಿದರು.ಎರಡನೆಯ ಮಹಾಯುದ್ಧ ದಲ್ಲಿ ಈ ದ್ವೀಪ ಸಮೂಹಗಳು ಜಪಾನ್ ದೇಶದ ಸೇನೆಯ ವಶವಾಯಿತು. ಇಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ನೇತೃತ್ವದಲ್ಲಿ ಸ್ವತಂತ್ರ ನಮ್ಮ ತ್ರಿವರ್ಣ ಧ್ವಜ ಹಾರಿಸಿ  ಭಾರತದ ಮೊದಲ ಸರಕಾರವನ್ನು ರಚಿಸಲಾಯಿತು. 


ಬೌಗೋಳಿಕ ಲಕ್ಷಣಗಳು


ಉತ್ತರ ದಕ್ಷಿಣವಾಗಿ ಹಬ್ಬಿದ 300ರಿಂದ 700 ಮೀಟರ್ ಎತ್ತರದ ಬೆಟ್ಟಗಳು ಮತ್ತು ಅದರಿಂದಾದ ಕಣಿವೆಗಳು ಇಲ್ಲಿಯ ಮೇಲ್ಮೈ ಲಕ್ಷಣ.ಕರಾವಳಿಯಲ್ಲಿ ಅನೇಕ ಕೊಲ್ಲಿಗಳಿವೆ.ನದಿಗಳೆಲ್ಲವೂ ಸಣ್ಣವು.ಸಾಗರಿಕ ಉಷ್ಣವಲಯದ ಹವಾಮಾನ ಇಲ್ಲಿಯದು.ನಿತ್ಯಹರಿದ್ವರ್ಣದ ಕಾಡು ಗಳು, ಮ್ಯಾನ್‍ಗ್ರೋವ್ ಸಸ್ಯಗಳು ಇಲ್ಲಿಯ ಸಸ್ಯ ವೈವಿಧ್ಯಗಳು.ಇಲ್ಲಿ ನಾಟಾ ಮಾಡಬಹುದಾದ ಸುಮಾರು 200ಕ್ಕೂ ಹೆಚ್ಚಿನ ಸಸ್ಯ ಪ್ರಭೇದಗಳು ಕಂಡು ಬರುತ್ತವೆ.ವಾಣಿಜ್ಯಿಕ ಬಳಕೆಯಲ್ಲಿರುವ ಪ್ರಭೇದಗಳಲ್ಲಿ ಗರ್ಜನ್, ಪಡೋಕ್ ಮುಖ್ಯವಾದರೆ ಇತರೆ ಮರಗಳಲ್ಲಿ ರುದ್ರಾಕ್ಷ, ಧೂಪ ಮರ ಗಳು ಹೆಚ್ಚಿನ ಸಂಖ್ಯೆಯಲ್ಲಿವೆ.


2011 ಜನಗಣತಿಯಂತೆ ಇಲ್ಲಿಯ ಜನಸಂಖ್ಯೆ 3,43,125. ಈ ಜನಸಂಖ್ಯೆಯಲ್ಲಿ ಇಲ್ಲಿಯ ಮೂಲವಾಸಿಗಳಾದ ಅಂಡಮಾನೀ ಅದಿವಾಸಿಗಳ ಸಂಖ್ಯೆ ಅತ್ಯಲ್ಪ..ಇದು ಐದು ಮುಖ್ಯ ಪಂಗಡಗಳಾದ ಗ್ರೇಟ್ ಅಂಡಮಾನೀಸ್, ಜರವಾ,ಜಂಗಿಲ್,ಒಂಗೇಸ್ ಮತ್ತು ಸೆಂಟನಲೀಸ್ ಗಳಲ್ಲಿ ಹರಡಿಕೊಂಡಿದೆ.ಹಲವಾರು ಜನಾಂಗಗಳು ನಶಿಸಿ ಹೋಗಿವೆ.ಇವುಗಳು ಪ್ರಪಂಚದ ಪ್ರಾಚೀನ ಜನಾಂಗಗಳಿಗೆ ಸೇರಿದವರು.



No comments: