ಮಾನವ ಜನ್ಮವನ್ನು ಪಾವನ ಮಾಡಿಕೊಳ್ಳೋಣ: ಡಾ.ಗುರುರಾಜ್ ಕರ್ಜಗಿ.
ಜೀವರಾಶಿಗಳಲ್ಲಿ ಶ್ರೇಷ್ಠವಾದ ಮಾನವ ಜನ್ಮವನ್ನು ಡಿ ವಿ ಜಿ ಯಂತವರ ಸಾಹಿತ್ಯದ ಬೆಳಕಿನಲ್ಲಿ ಪಾವನ ಮಾಡಿಕೊಳ್ಳೋಣ ಎಂದು ಶಿಕ್ಷಣ ತಜ್ಞರು ಹಾಗೂ ವಾಗ್ಮಿಗಳಾದ ಡಾ ಗುರುರಾಜ್ ಕರ್ಜಗಿರವರು ಕರೆ ನೀಡಿದರು.
ತುಮಕೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆದ ಡಿ ವಿ ಜಿ ಯವರ ಜೀವನಧರ್ಮ ದರ್ಶನ ಉಪನ್ಯಾಸ ಮಾಲಿಕೆಯ 100 ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಡಿ ವಿ ಜಿಯವರು ಸಲ್ಲಿಸಿದ ಕೊಡುಗೆ ಅಪಾರ, ತುಮಕೂರಿಗೂ ಡಿ ವಿ ಜಿ ರವರಿಗೂ ಅವಿನಾಭಾವ ಸಂಬಂಧವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿರವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಡಿ ವಿ ಜಿ ರವರ ಸಹೋದರ ಸಂಬಂಧಿ ಆರ್ ಚಂದ್ರಮೌಳಿ ರವರು ಡಿ ವಿ ಗುಂಡಪ್ಪನವರ ಸಮಾಜ ಮುಖಿ ಚಿಂತನೆಗಳನ್ನು ಉದಾಹರಣೆ ಸಮೇತ ವಿವರಿಸಿದರು.
ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸಿದ್ದ ಪಾವಗಡ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಪರಮಪೂಜ್ಯ ಸ್ವಾಮಿ ಜಪಾನಂದ್ ಜೀ ಮಹಾರಾಜ್ ರವರು ಡಿ ವಿ ಜಿ ಯವರ ಗೀತೆಯನ್ನು ಹಾಡಿ ಕಗ್ಗಗಳ ಮಹತ್ವ ಮತ್ತು ಕನ್ನಡ ಭಾಷೆಯ ಬಳಕೆಯ ಬಗ್ಗೆ ಯುವ ಜನತೆಗೆ ಮಾರ್ಗದರ್ಶನ ನೀಡಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತುಮಕೂರು ಘಟಕದ ಅಧ್ಯಕ್ಷರಾದ ಕೆ ಎಸ್ ಸಿದ್ದಲಿಂಗಪ್ಪ ರವರು ಡಿ ವಿ ಜಿ ರವರ ಜೀವನ ಧರ್ಮದರ್ಶನ ದ ನೂರು ಕಾರ್ಯಕ್ರಮ ಮಾಡಲು ಸಹಕರಿಸಿದ ಸರ್ವರನ್ನು ಸ್ಮರಿಸಿ ಧನ್ಯವಾದಗಳನ್ನು ಹೇಳಿದರು.
ಕಾರ್ಯಕ್ರಮಕ್ಕೂ ಮೊದಲು ಡಿ ವಿ ಜಿ ರವರ ಕಗ್ಗ ವಾಚನ ಮತ್ತು ಗಮಕ ಕಲಾಶ್ರೀ ವಿದ್ವಾನ್ ಎಂ ಜಿ ಸಿದ್ದರಾಮಯ್ಯ ರವರು ವ್ಯಾಖ್ಯಾನ ಮಾಡಿದರು.
ತುಮಕೂರು ವಿಶ್ವ ವಿದ್ಯಾನಿಲಯದದ ಉಪಕುಲಪತಿಗಳಾದ ಪ್ರೊ ಎಂ ವೆಂಕಟೇಶ್ವರಲು ಸ್ವಾಗತಿಸಿದರು.
ಪ್ರಜಾಪ್ರಗತಿ ಪತ್ರಿಕೆ ಸಂಪಾದಕರಾದ ಎಸ್ ನಾಗಣ್ಣ ರವರು ವಂದಿಸಿದರು.
ತುಮಕೂರು ಜಿಲ್ಲಾ ಕ ಸಾ ಪ ಮಹಿಳಾ ಪ್ರತಿನಿಧಿ ರಾಣಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು.
ವಾಸವಿ ಸಂಘದ ಅಧ್ಯಕ್ಷರಾದ ಡಾ ಆರ್.ಎಲ್ ರಮೇಶ್ ಬಾಬು,
ಜಿಲ್ಲಾ ಕ ಸಾ ಪ ಸಂಘಟನಾ ಕಾರ್ಯದರ್ಶಿ ತೇಜಸ್ವಿ ಕಿರಣ್,
ತಾಲ್ಲೂಕು ಕ ಸಾ ಪ ಅಧ್ಯಕ್ಷರಾದ ಚಿಕ್ಕಬೆಳ್ಳಾವಿ ಶಿವಕುಮಾರ್, ನಗರ ಕ ಸಾ ಪ ಅಧ್ಯಕ್ಷರಾದ ಗೀತಾ ನಾಗೇಶ್ ,ಕಾರ್ಯದರ್ಶಿ ಸಿಹಿಜೀವಿ ವೆಂಕಟೇಶ್ವರ, ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment