ಯಶಸ್ಸಿನ ಶಿಖರ ಏರೋಣ.
ಜೀವನದಲ್ಲಿ ಏನಾದರೂ ಸಾಧಿಸಬೇಕಾದರೆ ನಮಗೊಂದು ಸ್ಪಷ್ಟವಾದ ಗುರಿಯಿರಬೇಕು.ಜೊತೆಗೆ ಮಾರ್ಗದರ್ಶನ ಮಾಡಲು ಗುರುವಿರಬೇಕು. "ಮಾರ್ನೇ ತೋ ಹಾತಿ ಮಾರೋ ಲೂಟ್ನೇ ತೊ ಭಂಡಾರ್ ಲೂಟೋ " ಎಂಬಂತೆ ಚಿಕ್ಕ ಗುರಿಯನ್ನು ಹೊಂದದೆ ದೊಡ್ಡ ಗುರಿಯನ್ನು ಇಟ್ಟುಕೊಂಡು ಆ ಕಡೆ ಸಾಗಬೇಕು.
ನಮ್ಮ ಗುರಿಯೆಡೆಗೆ ಸಾಗುವಾಗ ನಮಗೆ ಕೆಲ ಅಡೆತಡೆಗಳು ಬರುವುದು ಸಹಜ ಅವುಗಳ ಮೆಟ್ಟಿ ಮುಂದೆ ಸಾಗಬೇಕು. ಅದರಂತೆ ಅಲ್ಲಲ್ಲಿ ನಮಗೆ ಯಶಸ್ಸು ಕೂಡಾ ಸಿಗುತ್ತವೆ ಆ ಯಶಸ್ಸು ನಮ್ಮ ತಲೆಗೇರಬಾರದು.ಆ ಯಶಸ್ಸಿಗೆ ಸಂತಸಪಟ್ಟು ಮುಂದೆ ಸಾಗಬೇಕು. ಏಕೆಂದರೆ ಯಶಸ್ಸಿಗೆ ಪುಲ್ ಸ್ಟಾಪ್ ಇಲ್ಲ ಬರೀ ಕಾಮಾಗಳು ಮಾತ್ರ ಇರುತ್ತವೆ. ನಮ್ಮ ಯಶಸ್ಸಿನ ಪಯಣ ನಿರಂತರವಾಗಿರಬೇಕು.
ಕಂಫರ್ಟ್ ಜೋನ್ ನಿಂದ ಹೊರಬಂದು ರಿಸ್ಕ್ ತೆಗೆದುಕೊಂಡ ಮಹನಿಯರು ಜೀವನದಲ್ಲಿ ಉನ್ನತವಾದದ್ದನ್ನು ಸಾಧಿಸಿದ್ದಾರೆ. ಈ ನಿಟ್ಟಿನಲ್ಲಿ ನಾವು ಯೋಚಿಸಬಹುದು ಫಾರ್ಚೂನ್ ಪೇವರ್ಸ್ ದ ಬ್ರೇವ್ ಎಂಬಂತೆ ಒಳ್ಳೆಯ ಕೆಲಸ ಮಾಡಲು ಕ್ಯಾಲ್ಕುಲೇಟೆಡ್ ರಿಸ್ಕ್ ತೆಗೆದುಕೊಂಡು ಯಶಸ್ಸು ಪಡೆಯಲು ಪ್ರಯತ್ನ ಮಾಡಬಹುದು.
ಯಶಸ್ಸಿನೆಡೆಗಿನ ನಮ್ಮ ಪಯಣದಲ್ಲಿ ಆಗಾಗ್ಗೆ ನಮ್ಮನ್ನು ಎದೆಗುಂದಿಸುವ ಟೀಕೆಗಳು ಎದುರಾಗಬಹುದು ಅವುಗಳ ಬಗ್ಗೆ ಅಷ್ಟು ತಲೆಕೆಡಿಸಿಕೊಳ್ಳದೇ ನಮ್ಮ ಕರ್ತವ್ಯಗಳಿಂದ ಅವರಿಗೆ ಉತ್ತರ ನೀಡಬೇಕು.ಉನ್ನತ ಸಾಧನೆಯ ಹಾದಿಯಲ್ಲಿ ಕಲ್ಲು ಮುಳ್ಳುಗಳ ದಾಟಿದ ಮೇಲೆ ಯಶಸ್ಸಿನ ಶಿಖರ ಖಂಡಿತವಾಗಿಯೂ ಸಿಕ್ಕೇ ಸಿಗುತ್ತದೆ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
No comments:
Post a Comment