ವೈದ್ಯರ ದಿನ
"ವೈದ್ಯೋ ನಾರಾಯಣ ಹರಿ"ಎಂಬಂತೆ ಡಾಕ್ಟರ್ ಗಳು ದೇವರ ಸಮಾನ.ಸಮಾಜದಲ್ಲಿ ಅವರಿಗೆ ತಮ್ಮದೇ ಆದ ಗೌರವವಿದೆ.ಅವರ ಸೇವೆಯನ್ನು ಎಷ್ಟು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರೂ ಸಾಲದು ಆದರೂ ಅವರಿಗಾಗಿ ರಾಷ್ಟ್ರ ಮಟ್ಟದಲ್ಲಿ ಒಂದು ದಿನವನ್ನು ಮೀಸಲಿಡಲಾಗಿದೆ ಮತ್ತು
ಭಾರತದಲ್ಲಿ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ:
ಮಾನವೀಯತೆಗೆ ಅವರ ನಿಸ್ವಾರ್ಥ ಸೇವೆಗಾಗಿ ವೈದ್ಯರು ಮತ್ತು ಆರೋಗ್ಯ ವೃತ್ತಿಪರರನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ.ಪ್ರಸಿದ್ಧ ವೈದ್ಯ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯಾಗಿದ್ದ ಡಾ. ಬಿಧನ್ ಚಂದ್ರ ರಾಯ್ ಅವರ ಜನ್ಮದಿನವನ್ನು ವೈದ್ಯರ ದಿನವೆಂದು ಆಚರಿಸಲಾಗುತ್ತದೆ. ಡಾ. ರಾಯ್ ಅವರು ಜುಲೈ 1, 1882 ರಂದು ಜನಿಸಿದರು
ಪಶ್ಚಿಮ ಬಂಗಾಳದ ಎರಡನೇ ಮುಖ್ಯಮಂತ್ರಿಯಾಗಿ, ವೈದ್ಯರಾಗಿ ಬಿ ಸಿ ರಾಯ್ ವೈದ್ಯಕೀಯ ರಂಗಕ್ಕೆ ಅಮೋಘ ಕೊಡುಗೆಗಳನ್ನು ನೀಡಿದ್ದಾರೆ. ಜಾದವಪುರ್ ಟಿ ಬಿ ಆಸ್ಪತ್ರೆ, ಚಿತ್ತರಂಜನ್ ಸೇವಾ ಸದನ, ಕಮಲಾ ನೆಹರೂ ಮೆಮೋರಿಯಲ್ ಆಸ್ಪತ್ರೆ, ವಿಕ್ಟೋರಿಯಾ ಇನ್ಸ್ ಟಿಟ್ಯೂಶನ್, ಚಿತ್ತರಂಜನ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಮಹಿಳೆಯರು ಮತ್ತು ಮಕ್ಕಳಿಗೆ ವಿಶೇಷವಾಗಿ ತೆರೆದಿರುವ ಚಿತ್ತರಂಜನ್ ಸೇವಾ ಸದನಗಳ ಸ್ಥಾಪನೆಯಲ್ಲಿ ಬಿ ಸಿ ರಾಯ್ ಪಾತ್ರ ಪ್ರಮುಖವಾಗಿದೆ. ಇವರ ಸೇವೆಯನ್ನು ಪರಿಗಣಿಸಿ 1961ರ ಫೆಬ್ರವರಿ 4ರಂದು ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಮ್ಮ 80 ನೇ ವಯಸ್ಸಿನಲ್ಲಿ 1962 ರಲ್ಲಿ ಹುಟ್ಟಿದ ದಿನಾಂಕದಂದೇ ನಿಧನರಾದರು. ನಮ್ಮ ಜೀವನದಲ್ಲಿ ಮತ್ತು ಸಮಾಜದಲ್ಲಿ ವೈದ್ಯರ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವೈದ್ಯರ ದಿನವನ್ನು ಆಚರಿಸಲಾಗುತ್ತದೆ.
2024 ರಲ್ಲಿ ರಾಷ್ಟ್ರೀಯ ವೈದ್ಯರ ದಿನದ ಥೀಮ್ "ಹೀಲಿಂಗ್ ಹ್ಯಾಂಡ್ಸ್, ಕೇರಿಂಗ್ ಹಾರ್ಟ್ಸ್."
ಸಿಹಿಜೀವಿ ವೆಂಕಟೇಶ್ವರ
ತುಮಕೂರು
No comments:
Post a Comment