1. ಬಲವಾದ ಗಾಳಿ ,ಮಳೆಯಿಂದ ತನ್ನ ಗೂಡು ಎಷ್ಟೇ ಬಾರಿ ನಾಶವಾದರೂ ತನ್ನ ಗೂಡು ಕಟ್ಟುವುದನ್ನು ಪಕ್ಷಿಯು ಬಿಟ್ಟುಬಿಡುವುದಿಲ್ಲ.
2. ಬಂಡೆಗಳು ಎದುರಾದಾಗ ನದಿಯು ಹರಿಯುವುದನ್ನು ನಿಲ್ಲಿಸುವುದಿಲ್ಲ. ತನ್ನ ದಾರಿಯನ್ನು ಕಂಡುಕೊಂಡು ನಿರಂತರವಾಗಿ ಹರಿದು ಸಮುದ್ರ ಸೇರುತ್ತದೆ.
3. ಮರದ ಕೊಂಬೆಗಳು ಮುರಿದಾಗ ಮರವು ಬೆಳೆಯುವುದನ್ನು ನಿಲ್ಲಿಸುವುದಿಲ್ಲ.ಬದಲಿಗೆ ಚಿಗುರುತ್ತಾ ಬೆಳೆಯುತ್ತಾ ಮತ್ತೆ ಮರವಾಗಿ ಕಂಗೊಳಿಸುತ್ತದೆ.
4. ಮೋಡಗಳು ಅಡ್ಡಿಯಾದವು ಎಂದು ಸೂರ್ಯನು ಹೊಳೆಯುವುದನ್ನು ನಿಲ್ಲಿಸುವುದಿಲ್ಲ. ಇನ್ನೂ ಪ್ರಖರವಾಗಿ ಬೆಳಗುತ್ತದೆ.
5. ಜೇಡದ ಬಲೆ ಹರಿದಾಗ ಅದು ಸುಮ್ಮನಿರುವುದಿಲ್ಲ. ಅದು ತಾಳ್ಮೆಯಿಂದ ಮತ್ತೊಮ್ಮೆ ನೇಯ್ಗೆ ಮಾಡುತ್ತದೆ.
6. ಮಣ್ಣು ಗಟ್ಟಿಯಾಗಿರುವುದರಿಂದ ಬೀಜವು ಮೊಳಕೆಯೊಡೆಯುವುದನ್ನು ನಿಲ್ಲಿಸುವುದಿಲ್ಲ.
ಈ ಮೇಲಿನ ಆರು ಪ್ರೇರಣಾದಾಯಕ ಘಟನೆಗಳು ನಮ್ಮನ್ನು ಸಾಧಿಸಲು ಪ್ರೇರಣೆ ನೀಡಬೇಕು.ನಮ್ಮ ಮೇಲೆ ನಮಗೆ ನಂಬಿಕೆ ಇದ್ದು ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದರೆ ಯಾವ ಗುರಿಯೂ ಕಠಿಣವಲ್ಲ.
ಪ್ರಯತ್ನಿಸುತ್ತಿರೋಣ ನಮ್ಮ ಗುರಿ ಮುಟ್ಟೋಣ.
No comments:
Post a Comment