ಅರೆಬರೆ ಜ್ಞಾನ ವಿನಾಶಕಾರಿ
ಏರ್‌ಪ್ಲೇನ್ ಕ್ಲೀನರ್ ಒಬ್ಬ ಪೈಲಟ್‌ನ ಕಾಕ್‌ಪಿಟ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ, "ಹೌ ಟು ಫ್ಲೈ ಆನ್ ಏರ್‌ಪ್ಲೇನ್ ಫಾರ್ ಬಿಗಿನರ್ಸ್ (ವಾಲ್ಯೂಮ್1)" ಎಂಬ ಪುಸ್ತಕವನ್ನು ನೋಡಿದ.
ಮೊದಲ ಪುಟವನ್ನು ತೆರೆದ "ಎಂಜಿನ್ ಅನ್ನು ಪ್ರಾರಂಭಿಸಲು, ಕೆಂಪು ಗುಂಡಿಯನ್ನು ಒತ್ತಿ...". ಅವನು ಹಾಗೆ ಮಾಡಿದನು ಮತ್ತು ವಿಮಾನದ ಎಂಜಿನ್ ಆನ್ ಆಯ್ತು...
ಅವನು ಸಂತೋಷದಿಂದ ಮುಂದಿನ ಪುಟವನ್ನು ತೆರೆದ...:
"ಏರೋಪ್ಲೇನ್ ಚಲಿಸುವಂತೆ ಮಾಡಲು, ನೀಲಿ ಗುಂಡಿಯನ್ನು ಒತ್ತಿ... "ಅವನು ಹಾಗೆ ಮಾಡಿದನು ಮತ್ತು ವಿಮಾನವು ಅದ್ಭುತ ವೇಗದಲ್ಲಿ ಚಲಿಸಲು ಪ್ರಾರಂಭಿಸಿತು ...
ಹಾರಬೇಕೆಂದು ಬಯಸಿ, ಮೂರನೇ ಪುಟವನ್ನು ತೆರೆದ ವಿಮಾನವನ್ನು ಹಾರಿಸಲು ದಯವಿಟ್ಟು ಹಸಿರು ಬಟನ್ ಒತ್ತಿರಿ...ಎಂದಿತ್ತು "ಅವನು ಹಾಗೆ ಮಾಡಿದ ಮತ್ತು ವಿಮಾನವು ಹಾರಲು ಪ್ರಾರಂಭಿಸಿತು ...
ಅವನು ಉತ್ಸುಕನಾಗಿದ್ದ...!!
ಇಪ್ಪತ್ತು ನಿಮಿಷಗಳ ಹಾರಾಟದ ನಂತರ, ತೃಪ್ತನಾಗಿ ಆಕಾಶದಿಂದ ಭೂಮಿಗೆ ಇಳಿಯಲು ಬಯಸಿದ್ದ. ಆದ್ದರಿಂದ ಅವನು ನಾಲ್ಕನೇ ಪುಟಕ್ಕೆ ನೋಡಲು ಪುಸ್ತಕ ತಿರುವಿದ. ಅವನಿಗೆ ಅಚ್ಚರಿ ಕಾದಿತ್ತು.
ನಾಲ್ಕನೇ ಪುಟದಲ್ಲಿ ಹೀಗಿತ್ತು "ವಿಮಾನವನ್ನು ಹೇಗೆ ಇಳಿಸುವುದು ಎಂದು ತಿಳಿಯಲು, ದಯವಿಟ್ಟು ಹತ್ತಿರದ ಪುಸ್ತಕದಂಗಡಿಯಲ್ಲಿ ವಾಲ್ಯೂಮ್ 2 ಪುಸ್ತಕ ಖರೀದಿಸಿ!"
ನಾವೂ ಬಹಳ ಜನ ಹೀಗೆಯೇ ಯಾವುದೇ ವಿಷಯಗಳ ಬಗ್ಗೆ ಸಂಪೂರ್ಣವಾಗಿ ತಿಳಿಯದೇ ಸಾಹಸ ಕಾರ್ಯಗಳಿಗೆ ಕೈ ಹಾಕಿ ಕೈ ಸುಟ್ಟುಕೊಂಡ ಉದಾಹರಣೆಗಳು ಬಹಳ ಇವೆ.half knowledge dangerous ಅಲ್ಲವೆ?
ಸಿಹಿಜೀವಿ ವೆಂಕಟೇಶ್ವರ
No comments:
Post a Comment