ಬಾರೆ ಹಣ್ಣು ತಿನ್ನೋಣ ಬಾರೆ
ನಾನು ಬಾಲ್ಯದಲ್ಲಿ ಬಹಳ ಇಷ್ಟ ಪಟ್ಟು ತಿಂದ ಹಣ್ಣುಗಳೆಂದರೆ ಬಾರೆ ಹಣ್ಣು ಮತ್ತು ಕಾರೆ ಹಣ್ಣು.ಕಾರೆ ಹಣ್ಣು ಕೀಳಲು ಹೋಗಿ ಅಂಗೈ ಮುಂಗೈ ತರಚು ಗಾಯಗಳಾದರೂ ಬಾಯಲ್ಲಿ ಆ ಹಣ್ಣಿನ ಸ್ವಾದದ ಮುಂದೆ ಅವು ಮಾಯವಾಗುತ್ತಿದ್ದವು.
ನಮ್ಮ ಊರಿನ ನಮ್ಮ ಮನೆಯ ಹಿಂದೆ ಚಿಕ್ಕಜ್ಜರ ರೊಪ್ಪವಿತ್ತು.ರೊಪ್ಪವೆಂದರೆ ಪ್ರಾಣಿಗಳಿಗೆ ಒಣ ಹುಲ್ಲು ಸಂಗ್ರಹಿಸುವ ಸಂರಕ್ಷಿತತಾಣ.ಅಲ್ಲಿ ಒಂದು ಬಾರೆ ಮರವಿತ್ತು.ಅದು ಹಣ್ಣು ಬಿಡುವ ಕಾಲಕ್ಕೆ ಊರಿನ ನನ್ನ ವಯಸ್ಸಿನ ಹುಡುಗರೆಲ್ಲ ಆ ಮರಕ್ಕೆ ಆಳಿಗೊಂದು ಕಲ್ಲು ಎಸೆದು ಹಣ್ಣು ಬೀಳಿಸಿಕೊಂಡು ತಿನ್ನುತ್ತಿದ್ದೆವು.ಬಾರೆ ಹಣ್ಣುಗಳಲ್ಲಿ ಮೂರು ರೀತಿ. ಹಸಿರು ಬಣ್ಣದಿಂದ ಕೂಡಿದ ಹಣ್ಣು ಬಹಳ ಕಹಿ ಮತ್ತು ಒಗರು.ಸುಕ್ಕಾದ ಕೆಂಪು ಬಣ್ಣದ ಹಣ್ಣುಗಳು ಸಿಹಿಯಾಗಿದ್ದರೂ ಅದರಲ್ಲಿ ಹುಳುಗಳು ಜಾಸ್ತಿ. ನನಗೆ ದೋರೆಗಾಯಿ ಬಾರೆ ಹಣ್ಣು ಬಹಳ ಇಷ್ಟವಾಗುತ್ತಿತ್ತು.ಇಂತಹ ಹಣ್ಣುಗಳಲ್ಲೂ ಕೆಲವೊಮ್ಮೆ ಹುಳುಗಳ ಇರುವಿಕೆಯನ್ನು ಗಮನಿಸಿ ಬಿಸಾಡಿದ ನೆನಪು.
ಬಾಲ್ಯದಲ್ಲಿ ನಾವು ಬರೀ ಸಂತೋಷಕ್ಕಾಗಿ ಮತ್ತು ಹೊಟ್ಟೆ ತುಂಬಲು ತಿನ್ನುತ್ತಿದ್ದ ಹಣ್ಣು ಔಷಧಿಗಳ ಆಗರ ಎಂಬುದು ಹಲವಾರು ಪುಸ್ತಕ ಓದಿದಾಗ ತಿಳಿಯಿತು.
ಬೇರೆ ಬೇರೆ ಭಾಗದಲ್ಲಿ ಈ ಹಣ್ಣನ್ನು ವಿವಿಧ ಹೆಸರುಗಳಿಂದ ಕರೆಯುತ್ತಾರೆ.
ಬೋರೆ ಹಣ್ಣು, ಬಾರೆ ಹಣ್ಣು, ಬುಗುರಿ ಹಣ್ಣು ಹೀಗೆ ನಾನಾ ಹೆಸರುಗಳಿಂದ ಕರೆಸಿಕೊಳ್ಳುವ
ಈ ಹಣ್ಣಿನಲ್ಲಿ ವಿಟಮಿನ್ ಎ, ಸಿ ಮತ್ತು ಖನಿಜ ಪೋಷಕಾಂಶಗಳು ಸಮೃದ್ಧವಾಗಿದೆ. ಇದು ಸ್ನಾಯುಗಳು, ನರಮಂಡಲ ಮತ್ತು ಚರ್ಮಕ್ಕೆ ಅಗತ್ಯವಿರುವ ಅನೇಕ ಪೋಷಕಾಂಶಗಳಿಂದ ತುಂಬಿದೆ. ಬೋರೆ ಹಣ್ಣುಗಳಲ್ಲಿರುವ ಪೊಟ್ಯಾಸಿಯಮ್, ರಂಜಕ, ಮ್ಯಾಂಗನೀಸ್, ಕಬ್ಬಿಣ ಹಾಗೂ ಸತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ಇದರಲ್ಲಿರುವ ಕಬ್ಬಿಣದ ಅಂಶವು ಹಿಮೋಗ್ಲೋಬಿನ್ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ.
ಇದರಲ್ಲಿರುವ ಕಬ್ಬಿಣದ ಅಂಶವು ಹಿಮೋಗ್ಲೋಬಿನ್ ಮಟ್ಟವನ್ನು ನಿಯಂತ್ರಿಸುತ್ತದೆ ಮತ್ತು ರಕ್ತಹೀನತೆಯನ್ನು ಕಡಿಮೆ ಮಾಡುತ್ತದೆ. ಬೋರೆ ಹಣ್ಣುಗಳಲ್ಲಿ ವಿಟಮಿನ್ ಸಿ ಹೇರಳವಾಗಿದ್ದು ಇದು ಮೈಬಣ್ಣಕ್ಕೆ ಹೆಚ್ಚಿನ ಕಾಂತಿ ನೀಡಲು ಸಹಕಾರಿಯಾಗಿದೆ. ಅಲ್ಲದೆ ಮೊಡವೆಗಳು ಇಲ್ಲದಂತೆ ಚರ್ಮವನ್ನು ರಕ್ಷಿಸುತ್ತದೆ. ಈ ಹಣ್ಣನ್ನು ಒಣಗಿಸಿ ತಿನ್ನುವುದರಿಂದ ಇದರಲ್ಲಿರುವ ಕ್ಯಾಲ್ಸಿಯಂ ಮತ್ತು ರಂಜಕದ ಅಂಶ ಮೂಳೆಗಳನ್ನು ಬಲಪಡಿಸಲು ಬಹಳ ಉಪಯುಕ್ತವಾಗಿದೆ. ಅಲ್ಲದೆ ಈ ಹಣ್ಣುಗಳಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆ ಮತ್ತು ಅಜೀರ್ಣ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇದರಲ್ಲಿರುವ ಆಂಟಿಆಕ್ಸಿಡೆಂಟ್ ಫೈಟೊಕೆಮಿಕಲ್ಸ್, ಪಾಲಿಸ್ಯಾಕರೈಡ್ಗಳು, ಫ್ಲೇವನಾಯ್ಡ್ಗಳು ಮತ್ತು ಸಪೋನಿನ್ಗಳು ಉತ್ತಮ ನಿದ್ರೆಗೆ ಸಹಾಯ ಮಾಡುತ್ತವೆ. ಅದಲ್ಲದೆ ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುವ ಗುಣವನ್ನು ಹೊಂದಿರುವುದರಿಂದ ಮಧುಮೇಹಿಗಳಿಗೂ ಒಳ್ಳೆಯದು. ಮಲಬದ್ಧತೆಯ ಸಮಸ್ಯೆ ಇರುವವರು ಇದನ್ನು ನಿಯಮಿತವಾಗಿ ಸೇವನೆ ಮಾಡುವುದು ಉತ್ತಮ.
ಬೋರೆ ಹಣ್ಣು ಆಸ್ಟಿಯೋಆರ್ಥ್ರೈಟಿಸ್ ತಡೆಗಟ್ಟಲು ಸಹಾಯ ಮಾಡುತ್ತದೆ. ಈ ಹಣ್ಣುಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದಲ್ಲದೆ ರಕ್ತ ಪರಿಚಲನೆಯನ್ನು ಸುಧಾರಿಸುತ್ತವೆ. ಇದು ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ ಮತ್ತು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಈ ಹಣ್ಣಿನ ಪೇಸ್ಟ್ ಮಾಡಿ ಅದನ್ನು ಚರ್ಮದ ಮೇಲೆ ಹಚ್ಚುವುದರಿಂದ ಗಾಯವು ಗುಣವಾಗುತ್ತದೆ ಮತ್ತು ಚರ್ಮವನ್ನು ಮೃದುಗೊಳಿಸುತ್ತದೆ. ಅಲ್ಲದೆ ಈ ಹಣ್ಣಿನ ಆಂಟಿಮೈಕ್ರೊಬಿಯಲ್ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳಿಂದಾಗಿ ಇದು ಸೋಂಕುಗಳನ್ನು ತಡೆಯುತ್ತದೆ. ಜೊತೆಗೆ ಹಸಿವನ್ನು ತಡೆದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಗೆ ಸಹಾಯಮಾಡುತ್ತದೆ.
ಪ್ರಸ್ತುತ ನಗರದಲ್ಲಿ ವಾಸಿಸುವ ನಾನು
ಇಂತಹ ಬಹೂಪಯೋಗಿ ಬಾರೆ ಹಣ್ಣನ್ನು ಕಂಡರೆ ಮೊದಲು ಕೊಂಡು ಮನೆಗೆ ತೆಗೆದುಕೊಂಡು ಹೋಗಿ ಕುಟುಂಬಸಮೇತ ತಿನ್ನುತ್ತೇನೆ.
ನಿಮ್ಮ ಕಣ್ಣಿಗೆ ಈ ಹಣ್ಣು ಬಿದ್ದರೆ ನೀವೂ ಸೇವಿಸಬಹುದು.
ಸಿಹಿಜೀವಿ ವೆಂಕಟೇಶ್ವರ
ತುಮಕೂರು
No comments:
Post a Comment