#ಭೂತಾನ್_ವಿಶೇಷ
#ಭೂತಾನ್_ನಲ್ಲಿಮದುವೆ_ಇಲ್ಲ!
ಭೂತಾನ್ ಮದುವೆಗಳು ನಮ್ಮ ದೇಶಕ್ಕಿಂತ ಭಿನ್ನ. ಅಲ್ಲಿ ಯಾವುದೇ ಯಂಗೇಜ್ ಮೆಂಟ್ ಇಲ್ಲ. ಪ್ರೀ ವೆಡ್ಡಿಂಗ್ ಶೂಟ್ ಇಲ್ಲ. ರಿಸೆಪ್ಷನ್ ಅಂತೂ ಇಲ್ಲವೇ ಇಲ್ಲ.ಹಾಗಾದರೆ ಮದುವೆ ಹೇಗೆ? ಸಿಂಪಲ್ ಗಂಡು ಹೆಣ್ಣು ಮೊದಲು ಪ್ರೀತಿಯಲ್ಲಿ ಬಿದ್ದು ನಾಲ್ಕಾರು ತಿಂಗಳು ಮರ ಸುತ್ತಿ ಪರಸ್ಪರ ಅರ್ಥ ಮಾಡಿಕೊಳ್ಳುತ್ತಾರೆ. ನಂತರ ಮದುವೆಯಾಗಲು ಸಿದ್ದವಾಗಿ ಮನೆಯವರ ಅನುಮತಿಯೊಂದಿಗೆ ಜೊತೆಯಲ್ಲಿ ವಾಸಿಸುತ್ತಾರೆ ಯಾವುದೇ ಸಂಪ್ರದಾಯದ ಸಮಾರಂಭಗಳು ನಡೆಯುವುದಿಲ್ಲ. ಬೀಗರೂಟವೂ ಇಲ್ಲ.
ಅದಕ್ಕೆ ಯಾವುದೇ ದಾಖಲೆ, ಮ್ಯಾರೇಜ್ ರಿಜಿಸ್ಟ್ರೆಶನ್ ಅಗತ್ಯವಿಲ್ಲ. ಮಕ್ಕಳ ಮದುವೆಗೆ ಅದರಲ್ಲೂ ಹೆಣ್ಣು ಹೆತ್ತವರು ಲಕ್ಷಾಂತರ ಸಾಲ ಮಾಡಿ ಮಾಡುವ ಮದುವೆಗಳು ಎಷ್ಟೋ ತಂದೆ ತಾಯಿಗಳ ನಿದ್ರೆಯಿಲ್ಲದ ರಾತ್ರಿ ಕಳೆಯುವಂತೆ ಮಾಡುವ ನಮ್ಮ ಮದುವೆಗಳನ್ನು ನೋಡಿದಾಗ ಭೂತಾನ್ ಮದುವೆಗಳು ಗಮನ ಸೆಳೆಯುತ್ತವೆ ನಮ್ಮ ಬಸ್ ಡ್ರೈವರ್ "ನಮ್ಗೆ" ಗೆ ಮದುವೆಯಾಗಿ ಮೂರು ಮಕ್ಕಳಿದ್ದರೆ ನಮ್ಮ ಗೈಡ್ "ತೆಂದಿನ್" ಈಗ ಲವ್ ಮಾಡುತ್ತಿದ್ದಾನಂತೆ ನಮ್ಮನ್ನು ಮದುವೆಗೆ ಆಹ್ವಾನಿಸುವೆ ಎಂದಿದ್ದಾನೆ. ನಾನು ಅವನ ಮದುವೆಗೆ ಮತ್ತೊಮ್ಮೆ ಭೂತಾನ್ ಗೆ ಹೋಗಬೇಕು. ಇಲ್ಲಿ ಮತ್ತೊಂದು ವಿಷಯ ನಿಮಗೆ ಹೇಳಲೇ ಬೇಕು ಭೂತಾನ್ ನಲ್ಲಿ ಮದುವೆ ಗಂಡುಗಳಿಗೆ ಬೇಡಿಕೆ ಹೆಚ್ಚು. ಕಾರಣ ಅಲ್ಲಿ ಹೆಚ್ಚು ಗಂಡು ಮಕ್ಕಳು ಬೌದ್ಧ ಭಿಕ್ಷುಗಳಾಗಿ ಅವಿವಾಹಿತರಾಗಿ ಉಳಿಯುತ್ತಾರೆ.ಅದರಿಂದಾಗಿ ಮದುವೆಗೆ ಸಿದ್ದವಾದ ಯುವತಿಯರು ಮೂರು ಜನ ಇದ್ದರೆ ಯುವಕರು ಒಬ್ಬರು ಮಾತ್ರ! ಅಂದರೆ ಗಂಡಿಗೆ ಬಹಳ ಡಿಮಾಂಡ್.
ಸಿಹಿಜೀವಿ ವೆಂಕಟೇಶ್ವರ
#sihijeeviVenkateshwara
#Bhutan #bhutantravel #bhutanese #marriage
No comments:
Post a Comment