ಬೆಂಗಳೂರು ತಂಡ ಹಾಲಿ ಚಾಂಪಿಯನ್ ಕೋಲ್ಕತ್ತಾವನ್ನು 7 ವಿಕೆಟ್‌ಗಳಿಂದ ಸೋಲಿಸಿತು.
ರಜತ್ ಪಾಟಿದಾರ್ 16 ಎಸೆತಗಳಲ್ಲಿ 34 ರನ್ ಗಳಿಸಿ ವೈಭವ್ ಅರೋರಾಗೆ ವಿಕೆಟ್ ಒಪ್ಪಿಸಿದರು. ಆದರೆ RCB ಚೇಸಿಂಗ್ ಮೇಲೆ ಸಂಪೂರ್ಣ ನಿಯಂತ್ರಣದಲ್ಲಿ ಮುಂದುವರೆದು. ವಿರಾಟ್ ಕೊಹ್ಲಿ ಉತ್ತಮವಾಗಿ ಆಡಿ ಅರ್ಧಶತಕದೊಂದಿಗೆ ಇನ್ನಿಂಗ್ಸ್ ಅನ್ನು ಸ್ಥಿರವಾಗಿರಿಸುತ್ತಾ ಮುನ್ನಡೆಸಿದರು.
ಫಿಲ್ ಸಾಲ್ಟ್ 31 ಎಸೆತಗಳಲ್ಲಿ 56 ರನ್ ಗಳಿಸಿ ಅಬ್ಬರದ ಬ್ಯಾಟಿಂಗ್ ಮಾಡಿ ಗೆಲುವಿಗೆ ಭದ್ರ ಬುನಾದಿ ಹಾಕಿದರು. ಅಜೇಯ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ ಅವರು 175 ರನ್‌ಗಳ ಗುರಿ ಏನೇನೂ ಅಲ್ಲ ಅಂತ ಬೇಗನೆ ಪಂದ್ಯ ಗೆದ್ದು ನಾವೆಲ್ಲರೂ ಸಮಯಕ್ಕೆ ಸರಿಯಾಗಿ ನಿದ್ರೆ ಮಾಡಲು ಸಹಕರಿಸಿದರು.
ಇಷ್ಟೆಲ್ಲಾ ಆದ ಮೇಲೂ ನಮ್ಮನ್ನು ಕಾಡುವ ಪ್ರಶ್ನೆ ಈ ಸಲನಾದ್ರೂ ಕಪ್ ನಮ್ದಾಗುತ್ತಾ?
ಕಾದು ನೋಡೋಣ...
ನಿಮ್ಮ
ಸಿಹಿಜೀವಿ ವೆಂಕಟೇಶ್ವರ
No comments:
Post a Comment