ಪ್ರತಿವರ್ಷ ಸೆಪ್ಟೆಂಬರ್ 16ರಂದು ವಿಶ್ವ ಓಜೋನ್ ದಿನವನ್ನು ಆಚರಿಸಲಾಗುತ್ತದೆ.
ಓಜೋನ್ ಒಂದು ಅನಿಲ (Gas). ಇದರ ರಾಸಾಯನಿಕ ಸೂತ್ರ O₃ ಅಂದರೆ ಮೂರು ಆಮ್ಲಜನಕ ಅಣುಗಳು!
ಬಣ್ಣವಿಲ್ಲದ, ಆದರೆ ಸ್ವಲ್ಪ “ಹುರಿ” ವಾಸನೆಯಿರುವ ಅನಿಲ.
ಇದು ವಾತಾವರಣದಲ್ಲಿ ಸಹಜವಾಗಿ ಉಂಟಾಗುತ್ತದೆ.
ಭೂಮಿಯ ವಾತಾವರಣದ ಸ್ಟ್ರಾಟೋಸ್ಫಿಯರ್ (Stratosphere) ಭಾಗದಲ್ಲಿ (ಸುಮಾರು 10–50 ಕಿಮೀ ಎತ್ತರದಲ್ಲಿ) ಓಜೋನ್ ಹೆಚ್ಚು ಸಾಂದ್ರತೆಯಲ್ಲಿ ಇರುತ್ತದೆ.
ಈ ಪದರವನ್ನು ಓಜೋನ್ ಪದರ (Ozone Layer) ಎಂದು ಕರೆಯಲಾಗುತ್ತದೆ.
ಇದು ಸೂರ್ಯನಿಂದ ಬರುವ ಅಲ್ಟ್ರಾ ವೈಲೆಟ್ (UV) ಕಿರಣಗಳನ್ನು ಶೋಷಿಸುತ್ತದೆ, ಭೂಮಿಯ ಜೀವಿಗಳಿಗೆ ರಕ್ಷಣೆ ನೀಡುತ್ತದೆ ಕುಡಿಯುವ ನೀರಿನ ಸ್ವಚ್ಛತೆಗೆ ಓಜೋನ್ ಬಳಸಲಾಗುತ್ತದೆ. ಗಾಳಿ ಮತ್ತು ವಸ್ತುಗಳನ್ನು ಹಾನಿಕಾರಕ ಜೀವಾಣುಗಳಿಂದ ಮುಕ್ತಗೊಳಿಸಲು ಸಹ ಓಜೋನ್ ಉಪಯುಕ್ತ.
ಕೈಗಾರಿಕೆಯಲ್ಲಿ ಬಳಸುವ CFCs (Chlorofluorocarbons), ಏರ್‌ಕಂಡಿಷನರ್, ಫ್ರಿಜ್ ಗ್ಯಾಸ್‌ಗಳು, ಸ್ಪ್ರೆಗಳಲ್ಲಿ ಬಳಸುವ ರಾಸಾಯನಿಕಗಳು ಓಜೋನ್ ಪದರವನ್ನು ಹಾನಿಗೊಳಿಸುತ್ತವೆ.
ನಮ್ಮ ಓಜೋನ್ ಪದರ ರಕ್ಷಿಸೋಣ ತನ್ಮೂಲಕ ನಮ್ಮ ರಕ್ಷಣೆ ಮಾಡಿಕೊಳ್ಳೋಣ.
ಸಿಹಿಜೀವಿ ವೆಂಕಟೇಶ್ವರ
ತುಮಕೂರು.

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ