*ವೀಣಾಪಾಣಿ*
ಸುಜ್ಞಾನದಾಯಿಕೆ ಶಾರದಾ ಮಾತೆ
ವಂದಿಪೆ ನಿನಗೆ ಹೇ ಜಗನ್ಮಾತೆ
ವಿದ್ಯೆ ಬುದ್ಧಿಯ ನೀಡುವ ತಾಯಿ
ಹರಸುತ ನಮ್ಮನ್ನು ನೀ ಕಾಯಿ.
ಸುವಿಮಳ ಚರಿತೆ ನಮಿಪೆ ನಿನಗೆ
ಗೆಲುವನು ಕರುಣಿಸು ನಮಗೆ
ಶ್ವೇತ ವಸ್ತ್ರ ದ ಶಾರದಾ ಮಾತೆ
ಜ್ಞಾನವ ನೀಡಮ್ಮ ವಾತ್ಸಲ್ಯದಾತೆ.
ವಾಣಿ ವೀಣಾಪಾಣಿಯೆ ಭಕ್ತಿದಾತೆ
ತಮವ ತೊರೆಯಮ್ಮ ಮುಕ್ತಿದಾತೆ
ಕರದಲಿ ಪುಸ್ತಕವ ಹಿಡಿದಿರುವೆ
ಶರಣೆಂದರೆ ಪೊರೆದು ಕಾಯುವೆ.
ಧರಸಿರುವೆ ಹೊಳೆವ ವರಮಣಿ
ಅಜನ ರಾಣಿ ಕರುಣಿಸು ವಾಣಿ
ಅರಿವನು ನೀಡುವ ತಾಯಿಸರಸ್ವತಿ
ನಿನ್ನ ಮಕ್ಕಳಿಗೆ ನೀಡು ಸದಾ ಸನ್ಮತಿ .
*ಸಿ ಜಿ ವೆಂಕಟೇಶ್ವರ*





